Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:7 - ಕನ್ನಡ ಸತ್ಯವೇದವು C.L. Bible (BSI)

7 ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:7
16 ತಿಳಿವುಗಳ ಹೋಲಿಕೆ  

ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II


ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ದುರುಳನು ನಿನ್ನನಲಕ್ಷ್ಯ ಮಾಡುವುದೆಂತು? I “ದೇವನೆನ್ನ ವಿಚಾರಿಸನು” ಎನ್ನುವುದೆಂತು? II


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು