Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನ ಶಕ್ತಿಯೇ, ನಿನಗಾಗಿ ನಾ ಕಾದಿರುವೆ I ನನ್ನಾಶ್ರಯ ದುರ್ಗ, ದೇವಾ, ನೀನೇ ಅಲ್ಲವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಬಲವೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ದೇವರೇ, ಬೆಟ್ಟಗಳ ಶಿಖರದಲ್ಲಿರುವ ಆಶ್ರಯದುರ್ಗ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರೇ, ನನ್ನ ಬಲವೇ, ನಿಮಗಾಗಿ ಕಾದುಕೊಂಡಿರುವೆನು. ನನ್ನ ದೇವರೇ, ನೀವು ನನ್ನ ಕೋಟೆಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:9
18 ತಿಳಿವುಗಳ ಹೋಲಿಕೆ  

ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಸಂಕಟ ಬಂದಾಗ, ಪ್ರಭು ನಿನಗೆ ಕಿವಿಗೊಡಲಿ I ಯಕೋಬ ದೇವರ ನಾಮ, ನಿನ್ನ ಕಾಪಾಡಲಿ II


ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು