Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:1 - ಕನ್ನಡ ಸತ್ಯವೇದವು C.L. Bible (BSI)

1 ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:1
12 ತಿಳಿವುಗಳ ಹೋಲಿಕೆ  

ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II


ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು