Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:3 - ಕನ್ನಡ ಸತ್ಯವೇದವು C.L. Bible (BSI)

3 ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ I ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ; ಯೆಹೋವನೇ, ಎಷ್ಟರವರೆಗೂ [ನನ್ನ ಕೈ ಬಿಟ್ಟಿರುವಿ]?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:3
15 ತಿಳಿವುಗಳ ಹೋಲಿಕೆ  

ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು