Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:6 - ಕನ್ನಡ ಸತ್ಯವೇದವು C.L. Bible (BSI)

6 ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನರನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:6
23 ತಿಳಿವುಗಳ ಹೋಲಿಕೆ  

ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ನನ್ನ ಗೋಳಾಟ ಪ್ರಭು, ನಿನಗೆ ಗೊತ್ತಿದೆಯಯ್ಯಾ I ನನ್ನ ಮನದಾಸೆ ನಿನಗೆ ಬಯಲಾಗಿದೆಯಯ್ಯಾ II


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು.


ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


“ಆಲಿಸು ಪ್ರಭು, ಕರುಣಿಸು, ನೆರವಾಗು ಬೇಗ” I ಎಂದು ಪ್ರಭು ನಾನಿನ್ನನು ಪ್ರಾರ್ಥಿಸಿದಾಗ II


ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II


ಸ್ತುತಿಸುವುದಿಲ್ಲ ಸತ್ತವರಾರೂ ಪ್ರಭುವನು I ಕೀರ್ತಿಸರು ಪಾತಾಳಕ್ಕಿಳಿವವರು ಆತನನು II


ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು