Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:7 - ಕನ್ನಡ ಸತ್ಯವೇದವು C.L. Bible (BSI)

7 ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದುಃಖದಿಂದ ನನ್ನ ಕಣ್ಣು ಡೊಗರಾಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಮೊಬ್ಬಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:7
10 ತಿಳಿವುಗಳ ಹೋಲಿಕೆ  

ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು.


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು