Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 6:9 - ಕನ್ನಡ ಸತ್ಯವೇದವು C.L. Bible (BSI)

9 ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 6:9
15 ತಿಳಿವುಗಳ ಹೋಲಿಕೆ  

ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು