Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:7 - ಕನ್ನಡ ಸತ್ಯವೇದವು C.L. Bible (BSI)

7 ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:7
9 ತಿಳಿವುಗಳ ಹೋಲಿಕೆ  

ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.


ಜೋರ್ಡನ್ ಪೂರ್ವದಲ್ಲಿದ್ದ ಗೋತ್ರಗಳು - ರೂಬೇನ್, ಗಾದ್ ಮತ್ತು ಪೂರ್ವ ಮನಸ್ಸೆ: ಎಲ್ಲಾ ರೀತಿಯ ಆಯುಧಗಳನ್ನು ಪ್ರಯೋಗಿಸಲು ತರಬೇತಿ ಹೊಂದಿದ 120,000 ಪುರುಷರು.


ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.


ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.


ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.


ಗರ್ಭಗುಡಿಯಿಂದಲೆ ದೇವನಿಂತೆಂದನು : I “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದುಕೊಡುವೆನು ಸುಖೋತೆಂಬ ಬಯಲನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು