Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:1 - ಕನ್ನಡ ಸತ್ಯವೇದವು C.L. Bible (BSI)

1 ದೇವಾ ಆಲಿಸೆನ್ನ ಮೊರೆಯನು I ಕಿವಿಗೊಟ್ಟು ಕೇಳೆನ್ನ ಜಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:1
11 ತಿಳಿವುಗಳ ಹೋಲಿಕೆ  

ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ವಿಜ್ಞಾಪನೆಗಳ ಕೋರಿಕೆಗೆ II


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು