Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:2 - ಕನ್ನಡ ಸತ್ಯವೇದವು C.L. Bible (BSI)

2 ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಎದೆಗುಂದಿದವನಾಗಿ ಭೂವಿುಯ ಕಡೇ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:2
20 ತಿಳಿವುಗಳ ಹೋಲಿಕೆ  

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು