Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:4
18 ತಿಳಿವುಗಳ ಹೋಲಿಕೆ  

ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II


“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II


ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II


ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು