Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:7 - ಕನ್ನಡ ಸತ್ಯವೇದವು C.L. Bible (BSI)

7 ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:7
15 ತಿಳಿವುಗಳ ಹೋಲಿಕೆ  

ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.


ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು