Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:8 - ಕನ್ನಡ ಸತ್ಯವೇದವು C.L. Bible (BSI)

8 ಸಲ್ಲಿಸುವೆನಾಗ ದಿನಬಿಡದೆ ನಿನಗೆ ಹರಕೆಗಳನು I ಸಂಕೀರ್ತಿಸುವೆನು ಸದಾ ನಿನ್ನ ಶ್ರೀನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:8
10 ತಿಳಿವುಗಳ ಹೋಲಿಕೆ  

ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು