Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:12 - ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:12
26 ತಿಳಿವುಗಳ ಹೋಲಿಕೆ  

ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”


ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.


ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.


ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು