Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:3 - ಕನ್ನಡ ಸತ್ಯವೇದವು C.L. Bible (BSI)

3 ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು ಅವನು ಬಾಗಿದ ಗೋಡೆಯೋ ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವದು ಇನ್ನೆಷ್ಟರವರೆಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:3
19 ತಿಳಿವುಗಳ ಹೋಲಿಕೆ  

ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II


“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II


ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ಸೋಮಾರಿಯೇ, ಎಷ್ಟು ಹೊತ್ತು ನಿದ್ರಿಸುವೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಯೆಹೂದ್ಯರೂ ವಕೀಲನಿಗೆ ಬೆಂಬಲವಾಗಿ ಅವನು ಹೇಳಿದ್ದೆಲ್ಲಾ ಸತ್ಯವೆಂದು ಸಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು