Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:4 - ಕನ್ನಡ ಸತ್ಯವೇದವು C.L. Bible (BSI)

4 ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:4
27 ತಿಳಿವುಗಳ ಹೋಲಿಕೆ  

ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.


ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.


ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ.


ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು