Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:7 - ಕನ್ನಡ ಸತ್ಯವೇದವು C.L. Bible (BSI)

7 ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ರಕ್ಷಣೆಗೂ ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ ಆಶ್ರಯವೂ ದೇವರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ರಕ್ಷಣೆಯೂ ಮಾನವೂ ದೇವರೇ. ಆತನೇ ನನಗೆ ಭದ್ರವಾದ ದುರ್ಗವೂ ಆಶ್ರಯಸ್ಥಾನವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ. ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:7
17 ತಿಳಿವುಗಳ ಹೋಲಿಕೆ  

ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ನನಗೋ ಪ್ರಭುವೇ ಕಲ್ಲು ಕೋಟೆ I ನನಗಾಶ್ರಯ ನೀಡುವ ಪೊರೆಬಂಡೆ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು