Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 63:11 - ಕನ್ನಡ ಸತ್ಯವೇದವು C.L. Bible (BSI)

11 ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 63:11
17 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.


ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.


ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II


ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು