Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 63:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ ಪ್ರಭಾವವನ್ನೂ ಕಂಡ ಪ್ರಕಾರ ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 63:2
19 ತಿಳಿವುಗಳ ಹೋಲಿಕೆ  

ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II


ಆಶ್ರಯಿಸಿರಿ ಸರ್ವೇಶನನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II


ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II


ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ದುಷ್ಟತನಕೆ ದೇವ, ನಿನಗಿಲ್ಲ ಒಲವು I ಕೆಟ್ಟತನಕೆ ನಿನ್ನ ಬಳಿಯಿಲ್ಲ ನಿಲುವು II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು