Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 63:6 - ಕನ್ನಡ ಸತ್ಯವೇದವು C.L. Bible (BSI)

6 ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 63:6
12 ತಿಳಿವುಗಳ ಹೋಲಿಕೆ  

ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II


ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ ! ನಲ್ಲ : ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ :


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ಪ್ರಭುವನು ನಾ ಹೊಗಳಿ ಹಾಡುವೆನು ಬಾಳಿನೊಳೆಲ್ಲ I ನನ್ನ ದೇವನನು ಭಜಿಸುವೆನು ನಾ ಜೀವಮಾನವೆಲ್ಲ II


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು