Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:10 - ಕನ್ನಡ ಸತ್ಯವೇದವು C.L. Bible (BSI)

10 ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:10
12 ತಿಳಿವುಗಳ ಹೋಲಿಕೆ  

ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಕಾಪಾಡು ಪ್ರಭು, ರಕ್ಷಿಸೆನ್ನ ಪ್ರಾಣವನು I ನಿರಾಶೆಗೊಳಿಸಬೇಡ, ಶರಣಾಗತನು ನಾನು II


ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು:


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು