Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:5 - ಕನ್ನಡ ಸತ್ಯವೇದವು C.L. Bible (BSI)

5 ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ - ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:5
17 ತಿಳಿವುಗಳ ಹೋಲಿಕೆ  

ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಅವರಾಡಿಕೊಳ್ಳುತಿಹರು ಪ್ರಭು ನೋಡನೆಂದು I ಯಕೋಬ್ಯರ ಸ್ವಾಮಿದೇವ ವಿಚಾರಿಸನೆಂದು II


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?


ಸಹಾಯಮಾಡಿದರು ಒಬ್ಬರಿಗೊಬ್ಬರು ಧೈರ್ಯ ಹೇಳಿಕೊಂಡರು ಒಬ್ಬರಿಗೊಬ್ಬರು.


ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.


ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು