Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:6 - ಕನ್ನಡ ಸತ್ಯವೇದವು C.L. Bible (BSI)

6 ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಕೆಡುಕನ್ನು ಕಲ್ಪಿಸಿ ಒಳ್ಳೇ ಉಪಾಯವನ್ನು ಕಂಡುಕೊಂಡಿದ್ದೇವೆ ಅಂದುಕೊಳ್ಳುತ್ತಾರೆ; ಅವರ ಹೃದಯವೂ ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:6
16 ತಿಳಿವುಗಳ ಹೋಲಿಕೆ  

ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.


ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.


ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ನಾನು ಕೂಗುವುದನ್ನು ಕೇಳಿ ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ಅವರಿಗೆ ಹೇಳಿದಳು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು