Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:7 - ಕನ್ನಡ ಸತ್ಯವೇದವು C.L. Bible (BSI)

7 ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ದೇವರು ಬಾಣವನ್ನು ಎಸೆಯಲು ಫಕ್ಕನೆ ಅವರಿಗೆ ಗಾಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:7
18 ತಿಳಿವುಗಳ ಹೋಲಿಕೆ  

ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು.


ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.


ಗುಟ್ಟಾದೆಡೆಯಿಂದ ಗುರಿಯಿಟ್ಟಿಹರು ನಿರಪರಾಧಿಗಳನೆ I ಅಂಜದೇ ಅಳುಕದೆ ಎಸೆವರು ಬಾಣಗಳನು ತಟ್ಟನೆ II


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು