Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:9 - ಕನ್ನಡ ಸತ್ಯವೇದವು C.L. Bible (BSI)

9 ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:9
13 ತಿಳಿವುಗಳ ಹೋಲಿಕೆ  

‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II


ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು