Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:10 - ಕನ್ನಡ ಸತ್ಯವೇದವು C.L. Bible (BSI)

10 ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೇಗಿಲಗೆರೆಗಳನ್ನು ತ್ಯಾವಿಸಿ ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತೀ; ಅದರ ಬೆಳೆಯನ್ನು ವೃದ್ಧಿಪಡಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಉತ್ತಿರುವ ಹೊಲಗಳ ಮೇಲೆ ಮಳೆ ಸುರಿಸಿ, ಹೆಂಟೆಗಳನ್ನು ಕರಗಿಸಿ, ಭೂಮಿಯನ್ನು ಮೃದುಗೊಳಿಸಿ, ಎಳೆ ಸಸಿಗಳನ್ನು ಬೆಳೆಸುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:10
7 ತಿಳಿವುಗಳ ಹೋಲಿಕೆ  

ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.


ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು