Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 65:11 - ಕನ್ನಡ ಸತ್ಯವೇದವು C.L. Bible (BSI)

11 ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದೀ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೊಸ ವರ್ಷವನ್ನು ಸಮೃದ್ಧಿಕರವಾದ ಸುಗ್ಗಿಯೊಂದಿಗೆ ಆರಂಭಿಸುವಾತನು ನೀನೇ. ಅನೇಕ ಬೆಳೆಗಳಿಂದ ಬಂಡಿಗಳನ್ನು ತುಂಬಿಸುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 65:11
17 ತಿಳಿವುಗಳ ಹೋಲಿಕೆ  

ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ದಡ್ಡರ ಸೊತ್ತು ಮೂಢತನ; ಜಾಣರಿಗೆ ಜ್ಞಾನವೆ ಭೂಷಣ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.


ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ.


ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.


ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.


ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು