Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:12 - ಕನ್ನಡ ಸತ್ಯವೇದವು C.L. Bible (BSI)

12 ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯರು ನಮ್ಮ ತಲೆಗಳ ಮೇಲೆಯೇ ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ಪಾರುಗಾಣಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ. ನಾವು ಬೆಂಕಿಯನ್ನೂ ನೀರನ್ನೂ ದಾಟುವಂತೆ ಮಾಡಿದ್ದೀರಿ. ಆದರೆ ನೀವು ನಮ್ಮನ್ನು ಸಮೃದ್ಧಿಯ ಸ್ಥಳದೊಳಗೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:12
16 ತಿಳಿವುಗಳ ಹೋಲಿಕೆ  

ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು