Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:2 - ಕನ್ನಡ ಸತ್ಯವೇದವು C.L. Bible (BSI)

2 ಹಾಡಲಿ ಆತನ ಶ್ರೀನಾಮ ಮಹಿಮೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ಹೆಸರಿನ ಮಹಿಮೆಯನ್ನು ಕೀರ್ತಿಸಿರಿ. ಸ್ತುತಿಗೀತೆಗಳಿಂದ ಆತನನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ. ದೇವರ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:2
17 ತಿಳಿವುಗಳ ಹೋಲಿಕೆ  

ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ : “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಸರ್ವೇಶ್ವರನ ಮಹಿಮೆಯನು ಹೊಗಳಲಿ ಆತನ ಸ್ತೋತ್ರವ ಪಸರಿಸಲಿ ದ್ವೀಪದ್ವೀಪಗಳಲಿ.


ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II


ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು