Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:3 - ಕನ್ನಡ ಸತ್ಯವೇದವು C.L. Bible (BSI)

3 “ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:3
19 ತಿಳಿವುಗಳ ಹೋಲಿಕೆ  

ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II


ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು


“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.


ಎದೆಗುಂದಿದವರಾದರು ಆ ವಿದೇಶಿಯರು I ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು II


ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು