Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:4 - ಕನ್ನಡ ಸತ್ಯವೇದವು C.L. Bible (BSI)

4 ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಭೂನಿವಾಸಿಗಳು ನಿನ್ನನ್ನು ಆರಾಧಿಸಲಿ. ಪ್ರತಿಯೊಬ್ಬರೂ ನಿನ್ನ ಹೆಸರನ್ನು ಕೀರ್ತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:4
12 ತಿಳಿವುಗಳ ಹೋಲಿಕೆ  

ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು