Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:5 - ಕನ್ನಡ ಸತ್ಯವೇದವು C.L. Bible (BSI)

5 ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳಿಕೆ ನರರಲ್ಲಿ ಭಯಹುಟ್ಟಿಸತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:5
11 ತಿಳಿವುಗಳ ಹೋಲಿಕೆ  

ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲೂ ಅನೇಕಾನೇಕ ಮಿನುಗು ಕಣ್ಣುಗಳಿದ್ದವು;


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು