Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:7 - ಕನ್ನಡ ಸತ್ಯವೇದವು C.L. Bible (BSI)

7 ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಖೋರರು ಏಳದಿರಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:7
21 ತಿಳಿವುಗಳ ಹೋಲಿಕೆ  

ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II


ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ I ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II


ಪೂರ್ವಪಶ್ಚಿಮದಿಂದ ಬರುವುದಿಲ್ಲ ಉದ್ಧಾರ I ಅರಣ್ಯದಿಂದ ದೊರಕುವುದಿಲ್ಲ ಜೀವೋದ್ಧಾರ II


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು