Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 67:7 - ಕನ್ನಡ ಸತ್ಯವೇದವು C.L. Bible (BSI)

7 ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ನಮ್ಮನ್ನು ಆಶೀರ್ವದಿಸುವನು. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 67:7
23 ತಿಳಿವುಗಳ ಹೋಲಿಕೆ  

ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಪೊಡವಿಯೆಲ್ಲವು ಭಯಪಡಲಿ ಪ್ರಭುವಿಗೆ I ಅಡಗಿ ನಡೆಯಲಿ ನಾಡಿಗರೆಲ್ಲ ಆತನಿಗೆ II


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು