Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:10 - ಕನ್ನಡ ಸತ್ಯವೇದವು C.L. Bible (BSI)

10 ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಿಸಿಕೊಂಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಸವರಿಸಿ ಕೊಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ಜನರು ಆ ನಾಡಿನಲ್ಲಿ ನೆಲಸಿದರು. ದೇವರೇ, ಅಲ್ಲಿಯ ಬಡಜನರಿಗೆ ನೀನು ಶ್ರೇಷ್ಠವಾದವುಗಳನ್ನೇ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಪ್ರಜೆಗಳು ಅದರಲ್ಲಿ ವಾಸಮಾಡಿದರು. ದೇವರೇ, ನಿಮ್ಮ ಒಳ್ಳೆಯತನದಿಂದ ಬಡವರಿಗೋಸ್ಕರ ಒದಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:10
18 ತಿಳಿವುಗಳ ಹೋಲಿಕೆ  

ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


“ಹೊಡೆದನು ಆಸರೆಯನು, ಚಿಮ್ಮಿತು ನೀರು, ಹರಿಯಿತು ನೆರೆಯು I ಆದರೆ ಕೊಡಬಲ್ಲನೆ ರೊಟ್ಟಿ, ಒದಗಿಸುವನೆ ಮಾಂಸವನು?” II


ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II


ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು