Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:12 - ಕನ್ನಡ ಸತ್ಯವೇದವು C.L. Bible (BSI)

12 ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ; ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:12
12 ತಿಳಿವುಗಳ ಹೋಲಿಕೆ  

ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗವಿಯಲ್ಲಿ ಅವಿತುಕೊಂಡರು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆದರೆ ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಕೊಟ್ಟ ಚಿನ್ನವನ್ನು ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಸ್ವೀಕರಿಸಿ ಅದನ್ನು ಇಸ್ರಯೇಲರಿಗೋಸ್ಕರ ಸ್ಮರಣಾರ್ಥವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದೊಳಗಿಟ್ಟರು.


ಅದನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಅರ್ಧವನ್ನೂ ಮಿಕ್ಕ ಸಮಾಜದವರಿಗೆ ಅರ್ಧವನ್ನೂ ಹಂಚಿಕೊಡಿ.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು