Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:2 - ಕನ್ನಡ ಸತ್ಯವೇದವು C.L. Bible (BSI)

2 ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:2
17 ತಿಳಿವುಗಳ ಹೋಲಿಕೆ  

ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II


ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II


ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.


ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.


ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ.


ನಿನ್ನ ಎಪಿಸ್ ಬಸವ ಬಿದ್ದುಹೋದದ್ದೇನು? ಸರ್ವೇಶ್ವರನೆ ಕೆಡವಲು ಅದು ನಿಲ್ಲಲಾರದೆ ಹೋಯಿತು !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು