Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:20 - ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಮ್ಮ ದೇವರು ನಮ್ಮನ್ನು ವಿಮೋಚಿಸುವದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ. ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:20
17 ತಿಳಿವುಗಳ ಹೋಲಿಕೆ  

“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು