Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:21 - ಕನ್ನಡ ಸತ್ಯವೇದವು C.L. Bible (BSI)

21 ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ ಸ್ವೇಚ್ಫೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ತನ್ನ ವೈರಿಗಳ ಶಿರಸ್ಸುಗಳನ್ನೂ ಪಾಪದಲ್ಲಿ ಜೀವಿಸುವವರ ತಲೆಗಳನ್ನೂ ಜಜ್ಜಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:21
15 ತಿಳಿವುಗಳ ಹೋಲಿಕೆ  

ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II


ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು