Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:25 - ಕನ್ನಡ ಸತ್ಯವೇದವು C.L. Bible (BSI)

25 ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ, ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮುಂಗಡೆಯಲ್ಲಿ ಹಾಡುವವರೂ ಹಿಂಗಡೆಯಲ್ಲಿ ವಾದ್ಯಬಾರಿಸುವವರೂ ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮುಂಭಾಗದಲ್ಲಿ ಗಾಯಕರೂ ಹಿಂಭಾಗದಲ್ಲಿ ವಾದ್ಯ ಬಾರಿಸುವವರೂ ಸುತ್ತಲು ದಮ್ಮಡಿ ಬಡಿಯುವ ಯುವತಿಯರೂ ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:25
13 ತಿಳಿವುಗಳ ಹೋಲಿಕೆ  

ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II


ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.


ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ I ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ II


ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು