Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:27 - ಕನ್ನಡ ಸತ್ಯವೇದವು C.L. Bible (BSI)

27 ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನೆಂಬ ಸಣ್ಣ ಗೋತ್ರದವರೂ ಗುಂಪಾಗಿ ಬರುವ ಯೆಹೂದಕುಲ ಪ್ರಭುಗಳೂ ಜೆಬುಲೂನ ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; ಅದರ ನಂತರ ಯೆಹೂದನ ಮಹಾಕುಲವಿದೆ. ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:27
17 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II


ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II


ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬ್ಬೀಯೆಜೆರನು ಒಂಬತ್ತನೆಯ ವರ್ಗದ ನಾಯಕ. ಒಂಬತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ಸೌಲನ ಸಂಬಂಧಿಕರಾದ ಬೆನ್ಯಾಮೀನ್ ಗೋತ್ರದಿಂದ: 3,000 ಸೈನಿಕರು;


ಒಮ್ಮೆ ಬೆನ್ಯಾಮೀನ್ ಹಾಗು ಯೂದ ಗೋತ್ರದ ಜನರ ಒಂದು ಗುಂಪು ದಾವೀದನು ವಾಸವಾಗಿದ್ದ ಕೋಟೆಯಬಳಿಗೆ ಹೋಯಿತು.


ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು.


ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.


ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.


ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,


ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು.


ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು