Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:3 - ಕನ್ನಡ ಸತ್ಯವೇದವು C.L. Bible (BSI)

3 ಸಜ್ಜನರಾದರೊ ಸಂತೋಷಿಸಲಿ I ದೇವರ ಮುಂದೆ ಆನಂದಿಸಲಿ I ಅತುಳ ಹರ್ಷಾನಂದಗೊಳ್ಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಉಲ್ಲಾಸಿಸಲಿ, ಆನಂದಧ್ವನಿಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸುವರು; ಉಲ್ಲಾಸಿಸುವರು, ಆನಂದಧ್ವನಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:3
16 ತಿಳಿವುಗಳ ಹೋಲಿಕೆ  

ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II


ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ ! ಆತನ ಮಹಿಮೆಯನು ಕೀರ್ತಿಸೋಣ;


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ಗರ್ವಿಗಳೇ, ಸಾಕುಮಾಡಿ ನಿಮ್ಮ ಸೊಕ್ಕುಮಾತುಗಳನು I ದುರ್ಜನರೇ, ತೋರಬೇಡಿ ನಿಮ್ಮ ಕೋರೆಕೊಂಬುಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು