Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:30 - ಕನ್ನಡ ಸತ್ಯವೇದವು C.L. Bible (BSI)

30 ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕೋಲಿನಿಂದ ಬಡಿದು ನಿನಗೆ ಬೇಕಾದದ್ದನ್ನೆಲ್ಲಾ ಆ ಪ್ರಾಣಿಗಳಿಂದ ಮಾಡಿಸು. ಆ ಜನಾಂಗಗಳಲ್ಲಿರುವ “ಹೋರಿಗಳು” ಮತ್ತು “ಹಸುಗಳು” ನಿನಗೆ ವಿಧೇಯವಾಗಿರುವಂತೆ ಮಾಡು. ನೀನು ಆ ಜನಾಂಗಗಳನ್ನು ಯುದ್ಧದಲ್ಲಿ ಸೋಲಿಸಿರುವುದರಿಂದ ಅವರು ನಿನಗೆ ಬೆಳ್ಳಿಯನ್ನು ತಂದುಕೊಡುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:30
21 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II


ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II


ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಅದು ಮಲಗುತ್ತದೆ ತಾವರೆ ಗಿಡಗಳಡಿಯಲಿ ವಿಶ್ರಮಿಸುತ್ತದೆ ಆಪಿನ ಮರೆಯಲಿ, ಕೆಸರು ಭೂಮಿಯಲಿ.


ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


“ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು