Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:35 - ಕನ್ನಡ ಸತ್ಯವೇದವು C.L. Bible (BSI)

35 ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲ್ಯರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:35
23 ತಿಳಿವುಗಳ ಹೋಲಿಕೆ  

ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II


ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.


ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು