Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:4 - ಕನ್ನಡ ಸತ್ಯವೇದವು C.L. Bible (BSI)

4 ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:4
19 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II


ಹಾಡಲಿ ಆತನ ಶ್ರೀನಾಮ ಮಹಿಮೆಗೆ II


ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II


ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು