Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:7 - ಕನ್ನಡ ಸತ್ಯವೇದವು C.L. Bible (BSI)

7 ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರೇ, ನೀನು ನಿನ್ನ ಪ್ರಜೆಯ ಮುಂಗಡೆಯಲ್ಲಿ ಹೊರಟು ಅರಣ್ಯಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:7
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು