Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:8 - ಕನ್ನಡ ಸತ್ಯವೇದವು C.L. Bible (BSI)

8 ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. ಇಸ್ರಾಯೇಲರ ದೇವರ ಮುಂದೆ, ಹೌದು, ದೇವರ ಮುಂದೆಯೇ ಸೀನಾಯಿ ಸಹ ಕದಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:8
16 ತಿಳಿವುಗಳ ಹೋಲಿಕೆ  

ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.


ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು