Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:1 - ಕನ್ನಡ ಸತ್ಯವೇದವು C.L. Bible (BSI)

1 ಒಡನೆ ಕೈ ನೀಡಿ ಕಾಪಾಡು ದೇವಾ I ಕುತ್ತಿಗೆಗೆ ಬಂದಿದೆ ತುಂಬು ಪ್ರವಾಹ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ರಕ್ಷಿಸು; ಪ್ರಾಣಾಪಾಯವಾಗುವಷ್ಟು ಜಲವು ಏರಿಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ರಕ್ಷಿಸು! ನನ್ನ ಕತ್ತಿನವರೆಗೂ ನೀರು ಏರಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ರಕ್ಷಿಸಿರಿ. ಏಕೆಂದರೆ, ಪ್ರವಾಹ ಕುತ್ತಿಗೆಯ ವರೆಗೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:1
15 ತಿಳಿವುಗಳ ಹೋಲಿಕೆ  

ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಪ್ರವಾಹವು ನನ್ನನ್ನು ಮುಳುಗಿಸಿತು; ಆಗ ಸತ್ತೆ ಎಂದುಕೊಂಡೆ ನಾನು.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು