Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:14 - ಕನ್ನಡ ಸತ್ಯವೇದವು C.L. Bible (BSI)

14 ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಕಳ್ಳುಸುಬಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು; ವೈರಿಗಳ ಕೈಯೊಳಗಿಂದ ಬಿಡಿಸು; ಮಹಾಜಲ ರಾಶಿಯಿಂದ ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನನ್ನು ಕಳ್ಳುಸುಬಿನಿಂದ ಮೇಲೆತ್ತು; ಮುಳುಗಿಹೋಗಲು ಬಿಡಬೇಡ. ನನ್ನನ್ನು ದ್ವೇಷಿಸುವ ಜನರಿಂದ ನನ್ನನ್ನು ರಕ್ಷಿಸು. ಈ ಆಳವಾದ ನೀರಿನಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:14
20 ತಿಳಿವುಗಳ ಹೋಲಿಕೆ  

ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II


ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


“ಹೇ ಸರ್ವೇಶ್ವರಾ, ಆಳವಾದ ಗುಳಿಯಲ್ಲಿ ನಾ ಕುಳಿತೆ ನಿನ್ನ ಹೆಸರೆತ್ತಿ ನಾನು ಪ್ರಾರ್ಥನೆಮಾಡಿದೆ.


ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II


ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು