Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:16 - ಕನ್ನಡ ಸತ್ಯವೇದವು C.L. Bible (BSI)

16 ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:16
12 ತಿಳಿವುಗಳ ಹೋಲಿಕೆ  

ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II


ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II


ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ I ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ II


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ಆವರಿಸಿಕೊಂಡವು ಪಾತಾಳ ಪಾಶಗಳು I ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು